ಬೆಂಗಳೂರು: ಮಹದಾಯಿ ನ್ಯಾಯಾಧಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ದೌರ್ಜನ್ಯ ಎಸಗಿರುವ ಪೆÇಲೀಸರ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಖಂಡಿಸಿದ್ದಾರೆ.

ಮಹಾದಾಯಿ ತೀರ್ಪು ವಿರೋಧಿಸಿ ರೈತರು ನೀರಿಗಾಗಿ ಪ್ರತಿಭಟನೆ ಮಾಡುವಾಗ ರೈತರು, ವೃದ್ಧರು ಎನ್ನುವುದನ್ನೇ ಲೆಕ್ಕಿಸದೆ ಪೆÇಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಕೆಲವು ಮನೆಗಳಿಗೆ ನುಗ್ಗಿ ಪೆÇಲೀಸರು ರಾಕ್ಷಸರಂತೆ ವರ್ತಿಸಿದ್ದಾರೆ. ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯನ್ನು ಬಂಧಿಸಿ ಅವರ ಮೇಲೆ ಪ್ರಕರಣವನ್ನು ದಾಖಲಿಸಿ, ಪೆÇಲೀಸರು ವಿದ್ಯಾರ್ಥಿ ಜೀವನದಲ್ಲಿ ಚೆಲ್ಲಾಟವಾಡಿರುವುದು ಖಂಡನೀಯವಾಗಿದೆ ಎಂದು ಹೇಳಿದ್ದಾರೆ.

ಪೆÇಲೀಸರ ಲಾಠಿ ಏಟಿಗೆ ರೈತರು ಮೂಳೆ ಮುರಿತಕ್ಕೊಳಗಾಗಿದ್ದಾರೆ, ಹಲವರಿಗೆ ಗಾಯಗಳಾಗಿವೆ. ಆದ್ದರಿಂದ ಅವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಬೇಕು ಹಾಗೂ ಪ್ರತಿಭಟನಾ ವೇಳೆ ಬಂಧಿತ ಅಮಾಯಕ ರೈತರ ಮೇಲಿನ ಪ್ರಕರಣವನ್ನು ಸರಕಾರ ಕೈ ಬಿಡಬೇಕು. ಬಂಧಿತರನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮೇಲಾಧಿಕಾರಿಗಳ ಆದೇಶವಿಲ್ಲದೆ ಪೊಲೀಸ್ ಪೇದೆಗಳು ಈ ರೀತಿ ವರ್ತಿಸಿದ್ದಾರೆಯೇ ಎಂಬ ಬಗ್ಗೆ  ಗೃಹ ಇಲಾಖೆಯ ಸ್ಪಷ್ಟಪಡಿಸಬೇಕು. ಈ ರೀತಿಯ ನಡೆಯಿಂದ ಜನರು ಪೆÇಲೀಸರ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುವಂತೆ ಆಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಗೃಹ ಇಲಾಖೆಯಲ್ಲಿ ಸುಧಾರಣೆಯನ್ನು ತರಬೇಕು.  ಹಾಗೂ ಜನ ಸ್ನೇಹಿಯಾದಂತಹ ಪೆÇಲೀಸ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು. ಮಾನವೀಯ ಮೌಲ್ಯವನ್ನು ರಕ್ಷಿಸಬೇಕಾದ ದೃಷ್ಟಿಯಲ್ಲಿ ಸರಕಾರ ಕ್ರಮವನ್ನು ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.