ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲೆ ಯ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಗಾರವು ಗೂಡಿನ ಬಳಿ ಸಮುದಾಯ ಭವನದಲ್ಲಿ ನಡೆಯಿತು.
ಈ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಾಗಾರದ ಅಧ್ಯಕ್ಷತೆಯನ್ನು ಎಸ್. ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹನೀಫ್ ಖಾನ್ ಕೊಡಾಜೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ರವರು ಎಸ್ಡಿಪಿಐ ಬಡವರ ಪಕ್ಷ ಈ ಪಕ್ಷದಲ್ಲಿ ಎಲ್ಲಾ ಜಾತಿ,ಧರ್ಮದವರು ಇದ್ದಾರೆ, ಈ ಪಕ್ಷದ ಹುಟ್ಟೆ ಈ ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಮತ್ತು ಹಕ್ಕು ಸಿಗುವಂತಹ ಕಲ್ಯಾಣ ರಾಜ್ಯದ ಪರಿಕಲ್ಪನೆಯಿಂದಾಗಿದೆ.ಆದುದರಿಂದ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು ತಮ್ಮ ತಮ್ಮ ಪ್ರದೇಶಗಳಲ್ಲಿ ಎಲ್ಲರೊಂದಿಗೆ ಬೆರೆತು ಅಭಿವೃದ್ಧಿ ಕೆಲಸಗಳನ್ನು ಇನ್ನಷ್ಟು ಹೆಚ್ಚಿಸಿ ನಮ್ಮ ಪಕ್ಷದ ಗುರಿಯನ್ನು ಇಡೇರಿಸಬೇಕಾಗಿದೆ ಎಂದು ಕರೆ ಕೊಟ್ಟರು.
ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ದಲಿತ ಸಂಘರ್ಷ ಸಮಿತಿ ರಾಜ್ಯ ಮಾಜಿ ಕೋಶಾಧಿಕಾರಿ,ಪರ್ಯಾಯ ರಾಜಕೀಯ ಚಿಂತಕರು, ಪಿಯು ಬೋರ್ಡಿನ ನಿವೃತ್ತ ಉಪ ನಿರ್ದೇಶಕರೂ ಆದ ಶ್ರೀ. ಹೆಬ್ಬಾಳ ಲಿಂಗರಾಜು ರವರು ತರಬೇತಿಯನ್ನು ನಡೆಸಿದರು,ಕಾರ್ಯಾಗಾರದ ಮುಖ್ಯ ಅತಿಥಿಯಾಗಿ ಆಗಮಿಸಿದಂತಹ ಎಸ್ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್. ಕೆ ಹಿತವಚನವನ್ನು ನೀಡಿದರರು.
ವೇದಿಕೆಯಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ,ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಅಹ್ಮದ್, ಜಿಲ್ಲಾ ಉಪಾಧ್ಯಕ್ಷರಾದ ಅಥಾವುಲ್ಲ ಜೋಕಟ್ಟೆ,ಬಂಟ್ವಾಳ ವಿಧಾನ ಸಭಾ ಸಮಿತಿ ಅಧ್ಯಕ್ಷರಾದ ಸಾಹುಲ್.ಎಸ್.ಎಚ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್IMR ಸ್ವಾಗತಿಸಿ, ಜಿಲ್ಲಾ ಪ್ರ.ಕಾರ್ಯದರ್ಶಿ ನವಾಝ್ ಉಳ್ಳಾಲ ವಂದಿಸಿ.ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ನಿರೂಪಿಸಿದರು.